ಗುಜರಾತ್‌ನಲ್ಲಿ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್ 2025ರ ಫೈನಲ್ ಪಂದ್ಯ ಆರಂಭವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್‌ನಲ್ಲಿ ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿದ್ದು, ಚೇಸಿಂಗ್ ಆಯ್ಕೆ ಮಾಡಿಕೊಂಡಿದೆ. ಇದರಿಂದಾಗಿ ಆರ್‌ಸಿಬಿ ಮೊದಲು ಬ್ಯಾಟಿಂಗ್‌ಗೆ ಇಳಿಯಲಿದೆ.
ಈ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಸೇರ್ಪಡೆಯಾಗಿದ್ದಾರೆ. ಇದರ ಹೊರತಾಗಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆರ್‌ಸಿಬಿ ತನ್ನ ಬಲಿಷ್ಠ ಆಟಗಾರರ ತಂಡದೊಂದಿಗೆ ಈ ಬಾರಿ ಟ್ರೋಫಿ ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದೆ. ರಜತ್ ಪಾಟೀದಾರ್‌ರವರು ತಂಡವನ್ನು ಮುನ್ನಡೆಸುತ್ತಿದ್ದು, ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ಜಿತೇಶ್ ಶರ್ಮಾ, ರೊಮಾರಿಯೋ ಶೆಫರ್ಡ್ ಮುಂತಾದ ಆಟಗಾರರು ತಂಡದ ಮೂಲ ಶಕ್ತಿಯಾಗಿದ್ದಾರೆ.
ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟೀದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹೇಜಲ್‌ವುಡ್, ಸುಯೇಶ್ ಶರ್ಮಾ/ಮಯಾಂಕ್ ಅಗರ್ವಾಲ್.
ಪಂಜಾಬ್ ಕಿಂಗ್ಸ್ ತಂಡ: ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಷ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೇಹಲ್ ವದೇರಾ, ಮಾರ್ಕಸ್ ಸ್ಟೋನಿಸ್, ಶಶಾಂಕ್ ಸಿಂಗ್, ಒಮರ್‌ಜಾಯ್, ಕೈಲ್ ಜೆಮಿಸನ್, ವಿಜಯಕುಮಾರ್ ವೈಶಾಕ್, ಅರ್ಶದೀಪ್ ಸಿಂಗ್, ಚಹಾಲ್.
ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ 18 ವರ್ಷಗಳು ಕಳೆದಿವೆ. ಆದರೆ, ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಇದುವರೆಗೆ ಒಂದೇ ಒಂದು ಟ್ರೋಫಿಯನ್ನೂ ಗೆದ್ದಿಲ್ಲ. ಈ ಬಾರಿಯ ಫೈನಲ್‌ನಲ್ಲಿ ಎರಡೂ ತಂಡಗಳು 18 ವರ್ಷಗಳ ಟ್ರೋಫಿ ಗೆಲ್ಲಲು ಕಾತರದಿಂದ ಕಾಯುತ್ತಿವೆ. ಆರ್‌ಸಿಬಿ ತಂಡವನ್ನು ರಜತ್ ಪಾಟೀದಾರ್ ಮುನ್ನಡೆಸುತ್ತಿದ್ದರೆ, ಪಂಜಾಬ್ ಕಿಂಗ್ಸ್‌ಗೆ ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಿದ್ದಾರೆ.
ಆರ್‌ಸಿಬಿಯ ಆರಂಭಿಕ ಜೋಡಿಯಾದ ವಿರಾಟ್ ಕೊಹ್ಲಿ ಮತ್ತು ಫಿಲಿಪ್ ಸಾಲ್ಟ್ ತಂಡಕ್ಕೆ ಭರ್ಜರಿ ಆರಂಭ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ಇವರಿಗೆ ರಜತ್ ಪಾಟೀದಾರ್ ಮತ್ತು ಟಿಮ್ ಡೇವಿಡ್‌ರಂತಹ ಆಕ್ರಮಣಕಾರಿ ಬ್ಯಾಟರ್‌ಗಳ ಬೆಂಬಲವಿದೆ. ಬೌಲಿಂಗ್‌ನಲ್ಲಿ ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್ ಮತ್ತು ಯಶ್ ದಯಾಳ್‌ರಂತಹ ಆಟಗಾರರು ತಂಡಕ್ಕೆ ಶಕ್ತಿ ತುಂಬಿದ್ದಾರೆ.
ಮತ್ತೊಂದೆಡೆ, ಪಂಜಾಬ್ ಕಿಂಗ್ಸ್ ತಂಡವೂ ಶಕ್ತಿಶಾಲಿಯಾಗಿದೆ. ಪ್ರಿಯಾಂಶ್ ಆರ್ಯ ಮತ್ತು ಜೋಶ್ ಇಂಗ್ಲಿಷ್ ಆರಂಭಿಕ ಜೋಡಿಯಾಗಿ ಆಡಲಿದ್ದು, ಶ್ರೇಯಸ್ ಅಯ್ಯರ್ ಮತ್ತು ಮಾರ್ಕಸ್ ಸ್ಟೋನಿಸ್ ಮಧ್ಯಮ ಕ್ರಮಾಂಕದಲ್ಲಿ ತಂಡವನ್ನು ಸ್ಥಿರಗೊಳಿಸಲಿದ್ದಾರೆ. ಬೌಲಿಂಗ್‌ನಲ್ಲಿ ಅರ್ಶದೀಪ್ ಸಿಂಗ್, ಚಹಾಲ್ ಮತ್ತು ವಿಜಯಕುಮಾರ್ ವೈಶಾಕ್‌ರಂತಹ ಆಟಗಾರರು ಆರ್‌ಸಿಬಿಯ ಬ್ಯಾಟಿಂಗ್ ಶಕ್ತಿಯನ್ನು ತಡೆಯಲು ಸನ್ನದ್ಧರಾಗಿದ್ದಾರೆ.





