ಐಪಿಎಲ್‌: ಫೈನಲ್‌ನಲ್ಲಿ ಅತೀ ಹೆಚ್ಚು ಬಾರಿ ಸೋತ ತಂಡ ಯಾವುದು? ಇಲ್ಲಿದೆ ಸಂಪೂರ್ಣ ಮಾಹಿತಿ..!

ಆರ್‌ಸಿಬಿ ಕಪ್ ಗೆದ್ದರೂ ಫೈನಲ್ ಸೋಲಿನ ಲಿಸ್ಟ್‌ನಲ್ಲಿ ಎರಡನೇ ಸ್ಥಾನ!

Befunky collage 2025 06 04t131512.253

ಐಪಿಎಲ್ 2025ರ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪಂಜಾಬ್ ಕಿಂಗ್ಸ್‌ ವಿರುದ್ಧ ಗೆಲುವು ಸಾಧಿಸಿ ತನ್ನ ಚೊಚ್ಚಲ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ ಲಕ್ಷಾಂತರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ. ನಾಲ್ಕನೇ ಬಾರಿಗೆ ಫೈನಲ್‌ಗೆ ಪ್ರವೇಶಿಸಿದ ಆರ್‌ಸಿಬಿ, ಈ ಸಲ ಕಪ್‌ ಎತ್ತಿಹಿಡಿದು ನಗುತ್ತಿದೆ. ಆದರೆ, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್‌ನಲ್ಲಿ ಸೋತ ತಂಡ ಯಾವುದು ಎಂಬ ಕುತೂಹಲ ಎಲ್ಲರಲ್ಲೂ ಇದೆ.

2008ರಲ್ಲಿ ಆರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಯಶಸ್ವಿಯಾಗಿ ತನ್ನ 18ನೇ ಸೀಸನ್‌ನ್ನು ಪೂರೈಸಿದೆ. ಮೊದಲ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ಗೆದ್ದು ಚೊಚ್ಚಲ ಟ್ರೋಫಿಯನ್ನು ಗೆದ್ದಿತ್ತು. ಇದುವರೆಗೆ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಲಾ ಐದು ಬಾರಿ ಟ್ರೋಫಿಯನ್ನು ಗೆದ್ದಿವೆ. ಆದರೆ, ಫೈನಲ್‌ನಲ್ಲಿ ಅತಿ ಹೆಚ್ಚು ಸೋಲು ಕಂಡ ತಂಡ ಎಂದರೆ ಚೆನ್ನೈ ಸೂಪರ್ ಕಿಂಗ್ಸ್. ಚೆನ್ನೈ ಒಟ್ಟು 10 ಬಾರಿ ಫೈನಲ್‌ಗೆ ತಲುಪಿದ್ದು, ಇದರಲ್ಲಿ 5 ಬಾರಿ ಟ್ರೋಫಿಯನ್ನು ಗೆದ್ದರೆ, 5 ಬಾರಿ ಸೋಲನುಭವಿಸಿದೆ.

ಎರಡನೇ ಸ್ಥಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೆ. ಆರ್‌ಸಿಬಿ 2025ಕ್ಕೂ ಮುನ್ನ 3 ಬಾರಿ (2009, 2011, 2016) ಫೈನಲ್‌ನಲ್ಲಿ ಸೋತಿತ್ತು. ಡೆಕ್ಕನ್ ಚಾರ್ಜರ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಕೈಚೆಲ್ಲಿತ್ತು. ಆದರೆ, 2025ರಲ್ಲಿ ರಜತ್ ಪಟಿದಾರ್ ನಾಯಕತ್ವದಲ್ಲಿ ಆರ್‌ಸಿಬಿ ತನ್ನ ಮೊದಲ ಟ್ರೋಫಿಯನ್ನು ಗೆದ್ದುಕೊಂಡಿದೆ.

ಮೂರನೇ ಸ್ಥಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಇದ್ದು, ಒಟ್ಟು 3 ಬಾರಿ ಫೈನಲ್‌ಗೆ ತಲುಪಿ, ಒಂದು ಬಾರಿ (2016) ಮಾತ್ರ ಗೆಲುವು ಸಾಧಿಸಿದೆ. ಇನ್ನುಳಿದಂತೆ ಮುಂಬೈ ಇಂಡಿಯನ್ಸ್, ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟನ್ಸ್ ಮತ್ತು ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ತಲಾ ಒಂದು ಬಾರಿ ಫೈನಲ್‌ನಲ್ಲಿ ಸೋತಿವೆ.

Exit mobile version