ನಟ ಸುನೀಲ್ ಶೆಟ್ಟಿ ಅವರ ಮಗಳು ಅಥಿಯಾ ಶೆಟ್ಟಿ ಮತ್ತು ಕ್ರಿಕೆಟಿಗ ಕೆ.ಎಲ್. ರಾಹುಲ್ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದಾರೆ. ಅಥಿಯಾ ಶೆಟ್ಟಿ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂತಸದ ಕ್ಷಣವು ಶೆಟ್ಟಿ ಮತ್ತು ರಾಹುಲ್ ಕುಟುಂಬಕ್ಕೆ ಅಪಾರ ಹರ್ಷವನ್ನು ತಂದಿದೆ.
ಕಳೆದ ಕೆಲವು ತಿಂಗಳುಗಳ ಹಿಂದೆಯೇ ಸೋಷಿಯಲ್ ಮೀಡಿಯಾದ ಮೂಲಕ ಈ ಜೋಡಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಘೋಷಿಸಿದ್ದರು. ಬೆಬಿಬಂಪ್ ಫೋಟೋಶೂಟ್ ಮಾಡಿಸಿಕೊಂಡು ಅಭಿಮಾನಿಗಳ ಗಮನ ಸೆಳೆದಿದ್ದ ಈ ಜೋಡಿ ಮದುವೆಯಾಗಿದ್ದರು.
