ಕ್ರಿಕೆಟಿಗ ಶಮಿ ಮಾಜಿ ಪತ್ನಿ ವಿರುದ್ಧ ಕೊಲೆ ಯತ್ನ ಕೇಸ್: ವಿವಾದದ ಸುಳಿಯಲ್ಲಿ ಹಸಿನ್ ಜಹಾನ್

111122212
ADVERTISEMENT
ADVERTISEMENT

ಕೋಲ್ಕತ್ತಾ: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಮಾಜಿ ಪತ್ನಿ ಹಸಿನ್ ಜಹಾನ್ ಮತ್ತು ಮಗಳು ಅರ್ಷಿ ಜಹಾನ್ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಾಗಿದೆ. ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಸೂರಿ ಪಟ್ಟಣದಲ್ಲಿ ನಡೆದ ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಘಟನೆಯ ವಿವರ

ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಸೂರಿ ಪಟ್ಟಣದ ವಾರ್ಡ್ ಸಂಖ್ಯೆ 5 ರಲ್ಲಿ ಭೂ ವಿವಾದದಿಂದ ಈ ಘರ್ಷಣೆ ಆರಂಭವಾಗಿದೆ. ಹಸಿನ್ ಜಹಾನ್ ತಮ್ಮ ಮಗಳು ಅರ್ಷಿ ಜಹಾನ್ ಹೆಸರಿನಲ್ಲಿರುವ ಜಮೀನಿನಲ್ಲಿ ನಿರ್ಮಾಣ ಕಾರ್ಯ ಆರಂಭಿಸಿದ್ದರು. ಆದರೆ, ಈ ಜಮೀನಿನ ಮೇಲೆ ಅಕ್ರಮವಾಗಿ ಹಿಡಿತ ಸಾಧಿಸಲು ಪ್ರಯತ್ನಿಸಿದ್ದಾರೆ ಎಂದು ಸ್ಥಳೀಯ ನೆರೆಹೊರೆಯವರು ಆರೋಪಿಸಿದ್ದಾರೆ. ಈ ಕಾರಣಕ್ಕೆ ನಿರ್ಮಾಣ ಕಾರ್ಯವನ್ನು ತಡೆಯಲು ಪ್ರಯತ್ನಿಸಿದಾಗ, ವಾಗ್ವಾದ ತೀವ್ರಗೊಂಡು ಜಗಳಕ್ಕೆ ತಿರುಗಿತ್ತು. ಈ ಘಟನೆಯಲ್ಲಿ ಹಸಿನ್ ಜಹಾನ್ ಮತ್ತು ಅವರ ಮಗಳು, ದಾಲಿಯಾ ಖತುನ್ ಎಂಬ ಮಹಿಳೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣ ವೇದಿಕೆ “@NCMIndiaa” ಈ ಘಟನೆಯ ವೀಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಹಸಿನ್ ಜಹಾನ್ ಮತ್ತು ಅರ್ಷಿ ಜಹಾನ್ ವಿರುದ್ಧ BNS ಸೆಕ್ಷನ್ 126(2), 115(2), 117(2), 109, 351(3) ಮತ್ತು 3(5) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿಸಿದೆ. ಕೊಲೆ ಯತ್ನ, ದೈಹಿಕ ಹಲ್ಲೆ ಸೇರಿದಂತೆ ಗಂಭೀರ ಆರೋಪಗಳಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Exit mobile version