ಪಂಜಾಬ್‌ನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವರ್ಸಸ್ ಗುಜರಾತ್ ಟೈಟನ್ಸ್ ಕ್ವಾಲೀಫೈಯರ್ ಮ್ಯಾಚ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡ ರೋಚಕ ಗೆಲುವುಯ ದಾಖಲಿಸಿದೆ. ಈ ಒಂದು ಮ್ಯಾಚ್‌ನಲ್ಲಿ ಸೋತ ಗುಜರಾತ್ ಟೈಟನ್ಸ್ ತಂಡ ತನ್ನ ಟೂರ್ನಿ ಜರ್ನಿಯನ್ನ ಮುಗಿಸಿ ಮನೆಗೆ ನಡೆದಿದೆ. ಮ್ಯಾಚ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡದೊಂದಿಗೆ ಸೆಣೆಸಾಡಲಿದೆ. ಈ ಮ್ಯಾಚ್‌ನಲ್ಲಿ ಯಾರು ಗೆಲ್ಲುತ್ತಾರೋ ಅವರು ಈಗಾಗಲೇ ಫೈನಲ್ ಪ್ರವೇಶಿಸಿರುವ ನಮ್ಮ ಹೆಮ್ಮೆಯ ಆರ್‌ಸಿಬಿ ತಂಡದೊಂದಿಗೆ ಕಪ್‌ಗಾಗಿ ಕಣಕ್ಕಿಳಿಯಲಿವೆ.
ಇಂದಿನ ಈ ಮ್ಯಾಚ್‌ನ ಮುಖ್ಯಾಂಶಗಳನ್ನ ನೋಡೋದಾದ್ರೆ.. ಪಂಜಾಬ್ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025 ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಐದು ಬಾರಿಯ ಚಾಂಪಿಯನ್ಸ್ ಮುಂಬೈ 21 ರನ್ಗಳಿಂದ ಗೆದ್ದುಕೊಳ್ಳುವ ಮೂಲಕ ಕ್ವಾಲಿಫೈಯರ್ 2 ಕ್ಕೆ ಅರ್ಹತೆ ಪಡೆದುಕೊಂಡಿದೆ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ 229 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ಗೆ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
