RCB ಮಾರ್ಕೆಟಿಂಗ್ ಮುಖ್ಯಸ್ಥ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ

Web 2025 06 06t160544.842

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಸಿಎಂ ಆದೇಶದ ಮೇರೆಗೆ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.ಈ ಘಟನೆಗೆ ಆರ್‌ಸಿಬಿ ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥರಾದ ನಿಖಿಲ್ ಸೋಸಲೆ ಅವರನ್ನ ಬಂಧಿಸಲಾಗಿದೆ.ಈ ಬಂಧನವನ್ನು ಪ್ರಶ್ನಿಸಿ ನಿಖಿಲ್ ಸೋಸಲೆ ಅವರ ಪತ್ನಿ ಮಾಳವಿಕಾ ನಾಯ್ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಬಂಧನಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ.

ಕಾಲ್ತುಳಿತ ಘಟನೆಗೆ ಆರ್‌ಸಿಬಿ ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದ ಮೇರೆಗೆ ನಿಖಿಲ್ ಸೋಸಲೆ ಅವರನ್ನು ಬಂಧಿಸಲಾಗಿದೆ. ಆದರೆ, ಈ ಬಂಧನವು ಕಾನೂನುಬಾಹಿರವಾಗಿದೆ ಎಂದು ಆರೋಪಿಸಿರುವ ಮಾಳವಿಕಾ ನಾಯ್, ಜೂನ್ 5 ರಂದು ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ರಿಟ್ ಅರ್ಜಿ ಸಲ್ಲಿಸಿದ್ದಾರೆ.ತನಿಖೆಯನ್ನೇ ನಡೆಸದೇ ಸಿಎಂ ಆದೇಶಾನುಸಾರ ಬಂಧಿಸಲಾಗಿದೆ.ಕಾನೂನು, ಸಂವಿಧಾನ ಕಡೆಗಣಿಸಿ ಬಂಧಿಸಲಾಗಿದ್ದು, ಈ ಮೂಲಕ ನಿಖಿಲ್ ಸೋಸಲೆಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಅಲ್ಲದೇ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದರು ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮಕ್ಕೆ ಆನ್‌ಲೈನ್‌ನಲ್ಲಿ ಉಚಿತ ಪಾಸ್‌ ವ್ಯವಸ್ಥೆ ಮಾಡಲಾಗಿತ್ತು ಎಂದು ರಿಟ್ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಪಾಸ್ ಇದ್ದವರಿಗಷ್ಟೇ ಕ್ರೀಡಾಂಗಣಕ್ಕೆ ಪ್ರವೇಶವಿತ್ತು. “ಆಟಗಾರರನ್ನು ವಿಮಾನ ನಿಲ್ದಾಣದಲ್ಲಿ ಡಿಸಿಎಂ ಖುದ್ದು ಸ್ವಾಗತಿಸಿದ್ದರು. ವಿಧಾನಸೌಧದಲ್ಲಿ ಸಿಎಂ ಮತ್ತು ಡಿಸಿಎಂ ಸನ್ಮಾನಿಸಿದ್ದರು.ಚಿನ್ನಸ್ವಾಮಿಯ ಸಂಭ್ರಮಾಚರಣೆಯಲ್ಲೂ ಡಿಸಿಎಂ ಭಾಗಿಯಾಗಿದ್ದರು. ಅವಘಡದ ಮಾಹಿತಿ ತಿಳಿದ ತಕ್ಷಣ ಆರ್‌ಸಿಬಿಯಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿತ್ತು. “ಹೀಗಾಗಿ ಆರ್‌ಸಿಬಿಯಿಂದ ಯಾವುದೇ ಲೋಪವಾಗಿಲ್ಲ. ಹೀಗಾಗಿ “ನಿಖಿಲ್ ಸೋಸಲೆಯವರ ಬಂಧನಕ್ಕೆ ತಡೆ ನೀಡಬೇಕು,” ಎಂದು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

Exit mobile version