• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 16, 2026 - 9:56 am
in ಕ್ರೀಡೆ
0 0
0
ಯ್ಯ (18)

ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಿಂಕು ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರ ವಿವಾಹದ ಕುರಿತು ಮಹತ್ವದ ಸುದ್ದಿ ಹೊರಬಿದ್ದಿದೆ. ಇಬ್ಬರೂ ಡಿಸೆಂಬರ್ 4ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ವರದಿಯಾಗಿದೆ. ಲಕ್ನೋದ ರಾಮದಾ ಹೋಟೆಲ್‌ನಲ್ಲಿ ವಿವಾಹ ಸಮಾರಂಭ ನಡೆಯಲಿದ್ದು, ಈಗಾಗಲೇ ಮದುವೆ ಸಿದ್ಧತೆಗಳು ಆರಂಭಗೊಂಡಿವೆ ಎನ್ನಲಾಗಿದೆ.

ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ಅವರ ವಿವಾಹಕ್ಕೆ ಎರಡೂ ಕುಟುಂಬಗಳ ಆಪ್ತರು, ಸ್ನೇಹಿತರು ಸೇರಿದಂತೆ ಕ್ರಿಕೆಟ್ ಮತ್ತು ರಾಜಕೀಯ ಕ್ಷೇತ್ರದ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಈ ಮೂಲಕ ಕ್ರಿಕೆಟ್ ಹಾಗೂ ರಾಜಕೀಯ ಕ್ಷೇತ್ರದ ಪ್ರಮುಖ ವ್ಯಕ್ತಿಗಳ ಸಮಾಗಮಕ್ಕೆ ಮದುವೆ ವೇದಿಕೆಯಾಗಲಿದೆ.

RelatedPosts

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ

ADVERTISEMENT
ADVERTISEMENT

ಹಲವು ಬಾರಿ ಮುಂದೂಡಿಕೆಯಾಗಿದ್ದ ಮದುವೆ

ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ಅವರು 2025ರ ಜೂನ್ 8ರಂದು ಲಕ್ನೋದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಿಶ್ಚಿತಾರ್ಥದ ಬಳಿಕ ನವೆಂಬರ್ 2025ರಲ್ಲಿ ವಾರಣಾಸಿಯ ತಾಜ್ ಹೋಟೆಲ್‌ನಲ್ಲಿ ವಿವಾಹ ನಡೆಯಲಿದೆ ಎಂಬ ವರದಿಗಳು ಹರಿದಾಡಿದ್ದವು. ಆದರೆ ರಿಂಕು ಸಿಂಗ್ ಅವರ ಕ್ರಿಕೆಟ್ ಬದ್ಧತೆಗಳಿಂದಾಗಿ ಮದುವೆ ಮುಂದೂಡಿಕೆಯಾಗಿತ್ತು.

ನಂತರ 2026ರ ಫೆಬ್ರವರಿಯಲ್ಲಿ ವಿವಾಹ ನಡೆಸಲು ಯೋಜಿಸಲಾಗಿತ್ತು. ಆದರೆ ಆ ಸಮಯದಲ್ಲಿ ಟಿ20 ವಿಶ್ವಕಪ್ ಸೇರಿದಂತೆ ಹಲವು ಪ್ರಮುಖ ಕ್ರಿಕೆಟ್ ಪಂದ್ಯಗಳು ಇದ್ದ ಕಾರಣ ಮದುವೆಯನ್ನು ಮತ್ತೆ ಮುಂದೂಡಲಾಗಿತ್ತು. ಇದೀಗ ಸುಮಾರು ಒಂದು ವರ್ಷದ ಬಳಿಕ ಡಿಸೆಂಬರ್ 4ರಂದು ವಿವಾಹ ನೆರವೇರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಹಳ್ಳಿಯಲ್ಲಿ ಮದುವೆಯಾಗುವ ಆಸೆ

ಪ್ರಿಯಾ ಸರೋಜ್ ಅವರಿಗೆ ತಮ್ಮ ಸ್ವಗ್ರಾಮದಲ್ಲೇ ಸಾಂಪ್ರದಾಯಿಕ ರೀತಿಯಲ್ಲಿ ಮದುವೆಯಾಗಬೇಕು ಎಂಬ ಆಸೆ ಇತ್ತು ಎನ್ನಲಾಗಿದೆ. ಅವರ ಕುಟುಂಬದಲ್ಲಿ ಹಲವು ಮದುವೆಗಳು ಗ್ರಾಮೀಣ ಸಂಪ್ರದಾಯದಂತೆ ನಡೆದಿರುವುದರಿಂದ, ಬಾಲ್ಯದಿಂದಲೂ ಹಳ್ಳಿ ವಾತಾವರಣದಲ್ಲಿ ನಡೆಯುವ ಮದುವೆಯನ್ನು ಅವರು ಕಂಡಿದ್ದರು. ಮಂಟಪ, ಕುಟುಂಬಸ್ಥರು, ಸಂಬಂಧಿಕರು ಹಾಗೂ ಊರಿನ ಜನರ ಸಮ್ಮುಖದಲ್ಲಿ ವಿವಾಹವಾಗುವುದು ಅವರ ಬಯಕೆಯಾಗಿತ್ತು ಎನ್ನಲಾಗಿದೆ.

ಆದರೆ ರಿಂಕು ಸಿಂಗ್ ಹಾಗೂ ಪ್ರಿಯಾ ಸರೋಜ್ ಇಬ್ಬರೂ ಸಾರ್ವಜನಿಕ ಜೀವನದಲ್ಲಿ ಜನಪ್ರಿಯರಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಗಣ್ಯರು ಹಾಗೂ ಅತಿಥಿಗಳು ಭಾಗವಹಿಸುವ ಸಾಧ್ಯತೆಯಿದೆ. ಹೀಗಾಗಿ ಲಕ್ನೋದಲ್ಲಿ ವಿವಾಹ ನಡೆಸಲು ನಿರ್ಧರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ರಿಂಕು ಮತ್ತು ಪ್ರಿಯಾ ಅವರ ನಿಶ್ಚಿತಾರ್ಥವೂ ಲಕ್ನೋದಲ್ಲಿಯೇ ನಡೆದಿತ್ತು. ಆ ಕಾರ್ಯಕ್ರಮದಲ್ಲಿ ಕ್ರಿಕೆಟ್ ಮತ್ತು ರಾಜಕೀಯ ಕ್ಷೇತ್ರದ ಹಲವು ಗಣ್ಯರು ಭಾಗವಹಿಸಿದ್ದರು. ಹೀಗಾಗಿ ವಿವಾಹಕ್ಕೂ ಲಕ್ನೋವೇ ಅನುಕೂಲಕರ ಸ್ಥಳವಾಗಿ ಆಯ್ಕೆಯಾಗಿದೆ ಎನ್ನಲಾಗಿದೆ.

ಇದರ ಜೊತೆಗೆ ಪ್ರಿಯಾ ಸರೋಜ್ ಅವರು ಸಮಾಜವಾದಿ ಪಕ್ಷದ ಸಂಸದೆಯಾಗಿದ್ದು, ಉತ್ತರ ಪ್ರದೇಶದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಲಕ್ನೋದಲ್ಲಿ ವಿವಾಹ ಆಯೋಜಿಸಿರುವುದು ರಾಜಕೀಯವಾಗಿಯೂ ಗಮನ ಸೆಳೆಯುತ್ತಿದೆ. ಆದರೆ ವಿವಾಹದ ದಿನಾಂಕ ಹಾಗೂ ಸ್ಥಳದ ಕುರಿತು ಕುಟುಂಬದಿಂದ ಅಧಿಕೃತ ಪ್ರಕಟಣೆ ಹೊರಬಂದ ಬಳಿಕವೇ ಅಂತಿಮ ದೃಢತೆ ಸಿಗಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T215838.621
    ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್
    September 17, 2026 | 0
  • ಹ್ಮೋ (23)
    ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
    September 17, 2026 | 0
  • Your paragraph text 2026 09 16T220742.532
    WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ
    September 16, 2026 | 0
  • ಯ್ಯ (16)
    ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ
    September 16, 2026 | 0
  • ಹ್ಮೋ (8)
    ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ, ಮುರ್ಮು ಅಭಿನಂದನೆ
    September 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version