ಅಹಮದಾಬಾದ್: 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ರಜತ್ ಪಾಟಿದಾರ್ ನಾಯಕತ್ವದ RCB ಸತತ ಎರಡನೇ IPL ಪ್ರಶಸ್ತಿ ಗೆದ್ದು ಸಂಭ್ರಮಿಸಿತು. ಸೋಲಿನ ಬೇಸರದಲ್ಲಿದ್ದರೂ, ಗುಜರಾತ್ ಟೈಟನ್ಸ್ ನಾಯಕ ಶುಭಮನ್ ಗಿಲ್ (Shubman Gill) RCBಗೆ ಅಭಿನಂದನೆ ಸಲ್ಲಿಸುವ ಮೂಲಕ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಆರ್‌ಸಿಬಿ 5 ವಿಕೆಟ್‌ಗಳ ಗೆಲುವು ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿದ ಗಿಲ್, “ಧೈರ್ಯವಾಗಿ ಆಡಿದ್ದೀರಿ. ಪ್ರಶಸ್ತಿ ಗೆಲ್ಲಲು ಆರ್‌ಸಿಬಿ ಸಂಪೂರ್ಣವಾಗಿ ಅರ್ಹ ತಂಡ” ಎಂದು ಬರೆದುಕೊಂಡಿದ್ದಾರೆ. ಫೈನಲ್‌ನಲ್ಲಿ ನಿರಾಸೆ ಅನುಭವಿಸಿದ ಬಳಿಕವೂ ಎದುರಾಳಿಯ ಸಾಧನೆಯನ್ನು ಹೊಗಳಿರುವ ಗಿಲ್ ಅವರ ನಡೆಗೆ ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತವಾಗಿದೆ.
ಪಂದ್ಯದ ಬಗ್ಗೆ ಹೇಳುವುದಾದರೆ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ಆರಂಭದಲ್ಲೇ ಆಘಾತ ಅನುಭವಿಸಿತು. ನಾಯಕ ಶುಭಮನ್ ಗಿಲ್ ಕೇವಲ 10 ರನ್ ಗಳಿಸಿ ಪೆವಿಲಿಯನ್ ಸೇರಿದರು. ನಂತರ ಸಾಯಿ ಸುದರ್ಶನ್ ಕೂಡ 12 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಪವರ್‌ಪ್ಲೇ ಅವಧಿಯಲ್ಲೇ ಗುಜರಾತ್ ತಂಡ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
GT’s Captain Shubman Gill and Siraj
You played well Shubman Gill throughout the season, proud of you. pic.twitter.com/wzDJxUprlM
— Fearless (@Hell373969) June 1, 2026
ಜೋಸ್ ಬಟ್ಲರ್ ಕೂಡ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು. 23 ಎಸೆತಗಳಲ್ಲಿ 19 ರನ್ ಗಳಿಸಿದ ಅವರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಸರೆಯಾದರು. ಅವರು 37 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿ ಗುಜರಾತ್ ತಂಡವನ್ನು 155 ರನ್‌ಗಳ ಮೊತ್ತಕ್ಕೆ ಕೊಂಡೊಯ್ದರು.
156 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿಗೆ ಆರಂಭಿಕ ಜೋಡಿ ವಿರಾಟ್ ಕೊಹ್ಲಿ ಮತ್ತು ವೆಂಕಟೇಶ್ ಅಯ್ಯರ್ ಉತ್ತಮ ಅಡಿಪಾಯ ಹಾಕಿಕೊಟ್ಟರು. ಮೊದಲ ವಿಕೆಟ್‌ಗೆ 62 ರನ್‌ಗಳ ಜೊತೆಯಾಟ ಮೂಡಿಬಂದಿತು. ವೆಂಕಟೇಶ್ ಅಯ್ಯರ್ ಕೇವಲ 16 ಎಸೆತಗಳಲ್ಲಿ 32 ರನ್ ಸಿಡಿಸಿ ತಂಡಕ್ಕೆ ವೇಗದ ಆರಂಭ ಒದಗಿಸಿದರು.
ಒಂದು ತುದಿಯಲ್ಲಿ ಅಚ್ಚುಕಟ್ಟಾಗಿ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ಮತ್ತೊಮ್ಮೆ ದೊಡ್ಡ ಪಂದ್ಯದಲ್ಲಿ ತಮ್ಮ ಅನುಭವ ಮತ್ತು ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಗುಜರಾತ್ ಬೌಲರ್‌ಗಳ ವಿರುದ್ಧ ಆಕ್ರಮಣಕಾರಿ ಹಾಗೂ ಜವಾಬ್ದಾರಿಯುತ ಆಟವಾಡಿದ ಅವರು 42 ಎಸೆತಗಳಲ್ಲಿ ಅಜೇಯ 75 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು.
ವಿರಾಟ್ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಆರ್‌ಸಿಬಿ ಕೇವಲ 18 ಓವರ್‌ಗಳಲ್ಲಿ ಗುರಿ ತಲುಪಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪಂದ್ಯಶ್ರೇಷ್ಠ ಪ್ರಶಸ್ತಿಯೂ ವಿರಾಟ್ ಕೊಹ್ಲಿಗೆ ಲಭಿಸಿತು.
