• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

KSCA ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 24, 2025 - 10:00 pm
in ಕ್ರೀಡೆ
0 0
0
Untitled design 2025 11 24T215034.327

ಬೆಂಗಳೂರು, ನವೆಂಬರ್ 24: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಭಾರತೀಯ ವೇಗಿ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿರೋಧಿ ಬಣದ ಅಭ್ಯರ್ಥಿ, ಕೆಎಸ್‌ಸಿಎ ಮಾಜಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಬಣದ ಶಾಂತಕುಮಾರ್ ಅವರ ನಾಮಪತ್ರವನ್ನು ತಾಂತ್ರಿಕ ದೋಷಗಳ ಕಾರಣದಿಂದ ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಇದರಿಂದಾಗಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಏಕೈಕ ಮಾನ್ಯ ಅಭ್ಯರ್ಥಿಯಾಗಿ ಉಳಿದಿದ್ದು, ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ.

RelatedPosts

ನೀರಜ್ ಭರ್ಜರಿ ಕಂಬ್ಯಾಕ್: ಕಾಮನ್‌ವೆಲ್ತ್ ಗೇಮ್ಸ್​ಗೆ ಚೋಪ್ರಾ ಎಂಟ್ರಿ!

ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ: ಇಂದಿನಿಂದ ಮಹಾರಾಜ ಟಿ20 ಟ್ರೋಫಿ ಆರಂಭ

ಶ್ರೇಯಾಂಕ ಬದಲಿಗೆ ಪ್ರೇಮಾ ರಾವತ್: ಟೀಂ ಇಂಡಿಯಾದಲ್ಲಿ ಹೊಸ ಮುಖ

ಮಾರ್ಚ್ 10ಕ್ಕೆ IPL 2027 ಆರಂಭ: ಮೇ 15ಕ್ಕೆ ಫೈನಲ್!

ADVERTISEMENT
ADVERTISEMENT

ಕಳೆದ ಕೆಲವು ತಿಂಗಳುಗಳಿಂದ ಸಂಸ್ಥೆಯ ಆಡಳಿತದಲ್ಲಿ ತೀವ್ರ ಗೊಂದಲ, ಆರೋಪ-ಪ್ರತ್ಯಾರೋಪಗಳ ನಡುವೆ ಆರ್‌ಸಿಬಿ ಕಾಲ್ತುಳಿತ ಪ್ರಕರಣ ತೀವ್ರ ಸ್ವರೂಪ ಪಡೆದಿತ್ತು. ಈ ಪ್ರಕರಣದಿಂದಾಗಿ ಹಾಲಿ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗಿತ್ತು. ಆ ನಂತರ ಕರ್ನಾಟಕ ಹೈಕೋರ್ಟ್ ಮಧ್ಯಪ್ರವೇಶಿಸಿ, ಡಿಸೆಂಬರ್ 7ರೊಳಗೆ ಚುನಾವಣೆ ನಡೆಸುವಂತೆ ಸೂಚನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ನಡೆದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಎರಡೇ ಪ್ರಮುಖ ಬಣಗಳು ಕಣಕ್ಕಿಳಿದವು. ಒಂದು ವೆಂಕಟೇಶ್ ಪ್ರಸಾದ್ ನೇತೃತ್ವದ ಬಣ, ಮತ್ತೊಂದು ಬ್ರಿಜೇಶ್ ಪಟೇಲ್ ಬೆಂಬಲಿತ ಶಾಂತಕುಮಾರ್ ಬಣ. ಆದರೆ ನಾಮಪತ್ರ ಪರಿಶೀಲನೆ ವೇಳೆ ಶಾಂತಕುಮಾರ್ ಅವರ ನಾಮಪತ್ರದಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿದ್ದು, ಅದನ್ನು ತಿರಸ್ಕರಿಸಲಾಯಿತು. ಈ ತೀರ್ಪು ಬ್ರಿಜೇಶ್ ಪಟೇಲ್ ಬಣಕ್ಕೆ ಭಾರೀ ಆಘಾತವಾಗಿದೆ.

ವೆಂಕಟೇಶ್ ಪ್ರಸಾದ್ ಅವರಿಗೆ ಕರ್ನಾಟಕ ಕ್ರಿಕೆಟ್‌ನ ದಿಗ್ಗಜರೇ ತೆರೆಮರೆಯಲ್ಲಿ ಬೆಂಬಲವಾಗಿ ನಿಂತಿದ್ದರು. ಭಾರತದ ಮಾಜಿ ಸ್ಪಿನ್ ದಿಗ್ಗಜ ಮತ್ತು ಕೆಎಸ್‌ಸಿಎ ಮಾಜಿ ಅಧ್ಯಕ್ಷ ಅನಿಲ್ ಕುಂಬ್ಳೆ, ವೇಗದ ದೈತ್ಯ ಜಾವಗಲ್ ಶ್ರೀನಾಥ್, ರಾಬಿನ್ ಉತ್ತಪ್ಪ, ಡಿ.ಕೆ. ರಾಜ್, ರೋಜರ್ ಬಿನ್ನಿ ಸೇರಿದಂತೆ ಹಲವು ಮಾಜಿ ಆಟಗಾರರು ಪ್ರಸಾದ್ ಅವರ ಪರ ಬಹಿರಂಗ ಬೆಂಬಲ ಘೋಷಿಸಿದ್ದರು.

ರಾಷ್ಟ್ರೀಯ ಕಾರ್ಟಿಂಗ್‌ನಲ್ಲಿ ಬೆಂಗಳೂರಿನ ಇಶಾನ್‌ ಮಾದೇಶ್‌ ಅಮೋಘ ಗೆಲುವು !

ಬೆಂಗಳೂರು: ಮಿಕೊ ಎಫ್‌ಎಂಎಸ್‌ಸಿಐ ರಾಷ್ಟ್ರೀಯ ರೊಟಾಕ್ಸ್‌ ಕಾರ್ಟಿಂಗ್‌ ಚಾಂಪಿಯನ್‌ಶಿಪ್‌ನ 5 ಮತ್ತು 6ನೇ ಸುತ್ತುಗಳು ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆದು ಕೊನೆಗೊಂಡಿದೆ. ಈ ಸ್ಪರ್ಧೆಯಲ್ಲಿ ಸ್ಥಳೀಯ ಹಿರ್ಮಣಿ ಬೆಂಗಳೂರಿನ ಇಶಾನ್‌ ಮಾದೇಶ್‌ (ಪೆರಿಗ್ರೈನ್ ರೇಸಿಂಗ್‌) ಹಿರಿಯರ ವಿಭಾಗದಲ್ಲಿ ಅತ್ಯಂತ ಪ್ರಭಾವಿ ಪ್ರದರ್ಶನ ನೀಡಿ ಗೆಲುವು ಸಾಧಿಸಿದರು. ಮುಂಬೈನ ಕಿಯಾನ್‌ ಶಾ (ರಾಯೊ ರೇಸಿಂಗ್‌) ಮತ್ತು ಕೃಷ್‌ ಗುಪ್ತಾ ಅವರೂ ತಮ್ಮ ತಮ್ಮ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ತೋರಿಸಿದರು.

ಹಿರಿಯರ ವಿಭಾಗದಲ್ಲಿ ಇಶಾನ್‌ ಮಾದೇಶ್‌ ಅವರು ತಮ್ಮ ವರ್ಚಸ್ಸನ್ನು ಎಲ್ಲಾ ಹಂತಗಳಲ್ಲಿ ಸ್ಥಾಪಿಸಿದರು. 5ನೇ ಸುತ್ತಿನ ಅರ್ಹತಾ ಸುತ್ತಿನಲ್ಲಿ ಅವರು ಪೋಲ್ ಪೊಸಿಷನ್ ಪಡೆದುಕೊಂಡರು. ಈ ಹಂತದಲ್ಲಿ ರಾಯೊ ರೇಸಿಂಗ್‌ ತಂಡದ ಕೃಷ್‌ ಗುಪ್ತಾ ಅವರು 0.216 ಸೆಕೆಂಡ್‌ ಹಿಂದೆ 2ನೇ ಸ್ಥಾನ ಪಡೆದರೆ, ಹಿರಿಯರ ವಿಭಾಗದಲ್ಲಿ ಚೊಚ್ಚಲ ಬಾರಿಗೆ ಸ್ಪರ್ಧಿಸಿದ ಕಿಯಾನ್‌ ಶಾ ಕೇವಲ 0.055 ಸೆಕೆಂಡ್‌ ಹಿನ್ನಡೆಯೊಂದಿಗೆ 3ನೇ ಸ್ಥಾನ ಗಳಿಸಿದರು.

ಹೀಟ್‌ 1 ಮತ್ತು ಪ್ರಿ-ಫೈನಲ್‌ ಸುತ್ತುಗಳಲ್ಲಿ ಇಶಾನ್‌ ಮಾದೇಶ್‌ ಸುಲಭವಾಗಿ ಗೆಲುವು ಸಾಧಿಸಿದರು. ಅಂತಿಮ ಫೈನಲ್‌ ರೇಸ್‌ನಲ್ಲಿ ಅವರು ತಮ್ಮ ಉತ್ತಮ ಫಾರ್ಮ್‌ನ್ನು ಮುಂದುವರೆಸಿ, ಗುರುಗ್ರಾಮದ ಆರವ್‌ ದೆವಾನ್‌ (ಲೀಫ್‌ಫ್ರಾಗ್‌ ರೇಸಿಂಗ್‌) ಮತ್ತು ಕೃಷ್‌ ಗುಪ್ತಾ ಅವರನ್ನು ಹಿಂದಿಕ್ಕಿ 1ನೇ ಸ್ಥಾನ ಪಡೆದರು. ಈ ಗೆಲುವು ಇಶಾನ್‌ ಅವರ ಸಾಮರ್ಥ್ಯ ಮತ್ತು ಸ್ಥಿರತೆಗೆ ಮತ್ತೊಮ್ಮೆ ಮುದ್ರೆಯೊತ್ತಿತು.

ಕಿರಿಯರ ವಿಭಾಗದಲ್ಲಿ ಮುಂಬೈನ ಕಿಯಾನ್‌ ಶಾ ಅವರು ಸ್ಥಿರವಾದ ಮತ್ತು ತಾಳ್ಮೆಯ ಪ್ರದರ್ಶನ ನೀಡಿ ಗಮನ ಸೆಳೆದರು. ಅರ್ಹತಾ ಸುತ್ತಿನಲ್ಲಿ ಅವರು 5ನೇ ಸ್ಥಾನ ಪಡೆದಿದ್ದರು. ಆದರೆ, ಮುಖ್ಯ ರೇಸ್‌ನಲ್ಲಿ ಅವರು ಧೃತಿಗೆಡಲಿಲ್ಲ. ರೇಸ್‌ ಆರಂಭವಾದ ತಕ್ಷಣವೇ ಅವರು 2ನೇ ಸ್ಥಾನಕ್ಕೆ ಏರಿದರು ಮತ್ತು ಆ ಸ್ಥಾನವನ್ನು ಫೈನಲ್‌ ವರೆಗೂ ಕಾಯ್ದುಕೊಂಡರು.

ಫೈನಲ್‌ ರೇಸ್‌ನಲ್ಲಿ ಕಿಯಾನ್‌ ಉತ್ತಮ ಆರಂಭ ಪಡೆದು ಮೊದಲ ಸ್ಥಾನಕ್ಕೆ ಏರಿದ್ದರು. ಆದರೆ, ಪುಣೆಯ ಕ್ರೆಸ್ಟ್‌ ಮೋಟಾರ್‌ಸ್ಪೋರ್ಟ್‌ನ ಅರಾಫತ್‌ ಶೇಖ್‌ ಅವರಿಂದ ಪ್ರಬಲ ಪೈಪೋಟಿ ಎದುರಾಯಿತು. ರೇಸ್‌ ಸಾಗಿದಂತೆ ಅಗ್ರಸ್ಥಾನಕ್ಕಾಗಿ ಐವರು ರೇಸರ್‌ಗಳ ನಡುವೆ ತೀವ್ರ ಪೈಪೋಟಿ ಉಂಟಾಯಿತು. ಕೊನೆಗೆ, ಕಿಯಾನ್‌ ತಮ್ಮ ತಾಳ್ಮೆ ಮತ್ತು ಕೌಶಲ್ಯವನ್ನು ಪ್ರದರ್ಶಿಸಿ, ಚೆನ್ನೈನ ಎಶಾಂತ್‌ ವೆಂಕಟೇಶನ್‌ (ಎಂಸ್ಪೋರ್ಟ್‌) ಅವರನ್ನು ಹಿಂದಿಕ್ಕಿ ಗೆಲುವು ಸಾಧಿಸಿದರು.

ರಾಯೊ ರೇಸಿಂಗ್‌ ತಂಡದ ಇನ್ನೊಬ್ಬ ರೇಸರ್‌ ಕೃಷ್‌ ಗುಪ್ತಾ ಅವರು ಹಿರಿಯರ ವಿಭಾಗದಲ್ಲಿ ಆಕರ್ಷಕ ಪ್ರದರ್ಶನ ನೀಡಿದರು. ಕೊನೆಯ ಎರಡು ಸುತ್ತುಗಳಲ್ಲಿ ಅವರು ಕ್ರಮವಾಗಿ 3 ಮತ್ತು 2ನೇ ಸ್ಥಾನ ಗಳಿಸಿದರು. ಈ ಸ್ಥಿರ ಫಲಿತಾಂಶಗಳ ಸಹಾಯದಿಂದ ಅವರು ಹಿರಿಯರ ವಿಭಾಗದ ಒಟ್ಟಾರೆ ಲೀಡರ್‌ಬೋರ್ಡ್‌ನಲ್ಲಿ 2ನೇ ಸ್ಥಾನ ಪಡೆದುಕೊಂಡರು. ಅದೇ ರೀತಿ, ಕಿರಿಯರ ವಿಭಾಗದಲ್ಲಿ ಗೆಲುವು ಸಾಧಿಸಿದ ಕಿಯಾನ್‌ ಶಾ ಅವರೂ ತಮ್ಮ ವಿಭಾಗದ ಒಟ್ಟಾರೆ ಲೀಡರ್‌ಬೋರ್ಡ್‌ನಲ್ಲಿ 2ನೇ ಸ್ಥಾನಕ್ಕೆ ಏರಿದರು.

5 ಮತ್ತು 6ನೇ ಸುತ್ತುಗಳನ್ನು ಒಟ್ಟಿಗೆ ನಡೆಸಿದ ಕಾರಣ, ರೇಸರ್‌ಗಳ ಫಿಟ್ನೆಸ್‌ ಮತ್ತು ಮಾನಸಿಕ ಸಾಮರ್ಥ್ಯಗಳು ತೀವ್ರ ಪರೀಕ್ಷೆಗೆ ಒಳಪಟ್ಟಿತು. ಎಲ್ಲಾ ರೇಸರ್‌ಗಳು ಈ ಸವಾಲನ್ನು ಯಶಸ್ವಿಯಾಗಿ ಎದುರಿಸಿದರು. ಮುಂದೆ, ಕಿಯಾನ್‌ ಶಾ ಅವರು ಡಿಸೆಂಬರ್‌ 15-16ರಂದು ಮಲೇಷ್ಯಾದಲ್ಲಿ ನಡೆಯಲಿರುವ ಎಫ್‌ಐಎ ಕಾರ್ಟಿಂಗ್‌ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

Untitled design 2026 06 20T181347.081

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

by ಶಾಲಿನಿ ಕೆ. ಡಿ
June 20, 2026 - 6:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (67)
    ನೀರಜ್ ಭರ್ಜರಿ ಕಂಬ್ಯಾಕ್: ಕಾಮನ್‌ವೆಲ್ತ್ ಗೇಮ್ಸ್​ಗೆ ಚೋಪ್ರಾ ಎಂಟ್ರಿ!
    June 20, 2026 | 0
  • Untitled design 2026 06 20T103432.126
    ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ: ಇಂದಿನಿಂದ ಮಹಾರಾಜ ಟಿ20 ಟ್ರೋಫಿ ಆರಂಭ
    June 20, 2026 | 0
  • Untitled design (56)
    ಶ್ರೇಯಾಂಕ ಬದಲಿಗೆ ಪ್ರೇಮಾ ರಾವತ್: ಟೀಂ ಇಂಡಿಯಾದಲ್ಲಿ ಹೊಸ ಮುಖ
    June 19, 2026 | 0
  • Untitled design (45)
    ಮಾರ್ಚ್ 10ಕ್ಕೆ IPL 2027 ಆರಂಭ: ಮೇ 15ಕ್ಕೆ ಫೈನಲ್!
    June 18, 2026 | 0
  • Untitled design (38)
    ರೊನಾಲ್ಡೊ ಹೆಸರಿನ ಐತಿಹಾಸಿಕ ದಾಖಲೆ ಮುರಿದ ಮೆಸ್ಸಿ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version