• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳಿಂದ ಪದವೀಧರರ ನೇಮಕ

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 17, 2026 - 3:19 pm
in ತಂತ್ರಜ್ಞಾನ
0 0
0
Untitled design 2026 08 17T151817.349

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಕಾರ್ಯಕ್ರಮಕ್ಕಾಗಿ ದೇಶದ 37 ನಗರಗಳ 58 ಪ್ರತಿಷ್ಠಿತ ಬಿಸಿನೆಸ್ ಸ್ಕೂಲ್‌ಗಳಿಂದ ಹೊಸದಾಗಿ 489 ಪದವೀಧರರನ್ನು ನೇಮಕ ಮಾಡಿಕೊಂಡಿದೆ.

ಐಐಎಂ ಬೆಂಗಳೂರು, ಐಐಎಂ ಲಕ್ನೋ, ಐಐಎಂ ಕೋಳಿಕ್ಕೋಡ್‌, ಎಕ್ಸ್‌ಎಲ್‌ಆರ್‌ಐ, ಐಎಸ್‌ಬಿ ಹೈದರಾಬಾದ್‌ನಂತಹ ದೇಶದ ಅತ್ಯುನ್ನತ ಮ್ಯಾನೇಜ್ಮೆಂಟ್ ಸಂಸ್ಥೆಗಳಿಂದ ಈ ಪ್ರತಿಭೆಗಳನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ, ನೇಮಕಗೊಂಡವರಲ್ಲಿ ಶೇ. 42ಕ್ಕೂ ಹೆಚ್ಚು ಮಂದಿ ಮಹಿಳೆಯರಾಗಿದ್ದಾರೆ.

RelatedPosts

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ

ಮನುಷ್ಯನಿಗೆ ಮಾರಕವಾಗುತ್ತಾ… ಎಐ!

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

ADVERTISEMENT
ADVERTISEMENT
ಏನಿದು ‘ಟ್ಯಾಲೆಂಟ್ ಆಕ್ಸಿಲರೇಟರ್’ ಕಾರ್ಯಕ್ರಮ?

ಇದು ಹೊಸದಾಗಿ ನೇಮಕಗೊಂಡ ಉದ್ಯೋಗಿಗಳಿಗೆ ನೀಡಲಾಗುವ 2 ವಾರಗಳ ತರಬೇತಿ ಕಾರ್ಯಕ್ರಮವಾಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್ ಮತ್ತು ಪುಣೆಯಲ್ಲಿರುವ ಕಾಗ್ನಿಜೆಂಟ್ ಕ್ಯಾಂಪಸ್‌ಗಳಲ್ಲಿ ಏಕಕಾಲದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.

ಈ ಅವಧಿಯಲ್ಲಿ ಹೊಸ ಉದ್ಯೋಗಿಗಳಿಗೆ ಕಂಪನಿಯ ಮೌಲ್ಯಗಳು, ಸೇಲ್ಸ್ ಮತ್ತು ಮಾರ್ಕೆಟಿಂಗ್ ತರಬೇತಿ ನೀಡಲಾಗುತ್ತದೆ. ಜೊತೆಗೆ, ಕಾಗ್ನಿಜೆಂಟ್‌ನ ಹಿರಿಯ ನಾಯಕತ್ವ ತಂಡದೊಂದಿಗೆ ನೇರವಾಗಿ ಸಂವಾದ ನಡೆಸುವ ಅವಕಾಶವೂ ಸಿಗಲಿದೆ.

ಟೆಕ್‌ ಹಿನ್ನೆಲೆ ಇಲ್ಲದವರಿಗೂ ಮಣೆ!

ಇಂದಿನ ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಕೇವಲ ಇಂಜಿನಿಯರ್‌ಗಳು ಮಾತ್ರವಲ್ಲ, ವಿಭಿನ್ನ ಆಲೋಚನೆ ಮತ್ತು ಕೌಶಲ್ಯವುಳ್ಳವರ ಅಗತ್ಯವಿದೆ ಎಂಬುದನ್ನು ಕಾಗ್ನಿಜೆಂಟ್ ಮನಗಂಡಿದೆ. ಈ ಹಿನ್ನೆಲೆಯಲ್ಲಿ ಹೊಸದಾಗಿ ನೇಮಕಗೊಂಡವರ ಪೈಕಿ ಶೇ. 37ಕ್ಕೂ ಹೆಚ್ಚು ಮಂದಿ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ಗಣಿತ (ಸ್ಟೆಮ್‌) ಹಿನ್ನೆಲೆ ಇಲ್ಲದವರೂ ಇದ್ದಾರೆ.

ಬದಲಾಗಿ ಸಮಾಜಶಾಸ್ತ್ರ, ಮನೋವಿಜ್ಞಾನ, ಇಂಡಸ್ಟ್ರಿಯಲ್ ಡಿಸೈನ್ ಮತ್ತು ಕಚೇರಿ ನಿರ್ವಹಣೆಯಂತಹ ನಾನ್ ಟೆಕ್ ವಿಭಾಗಗಳಲ್ಲಿ ವ್ಯಾಸಂಗ ಮಾಡಿದವರನ್ನು ಕಂಪನಿ ನೇಮಕ ಮಾಡಿಕೊಂಡಿದೆ.

ವೈವಿಧ್ಯತೆಯೇ ನಮ್ಮ ಬಲ

ಈ ಬಗ್ಗೆ ಮಾತನಾಡಿದ ಕಾಗ್ನಿಜೆಂಟ್ ಇಂಡಿಯಾದ ಸಿಎಂಡಿ ಮತ್ತು ಗ್ಲೋಬಲ್ ಆಪರೇಶನ್ಸ್ ಅಧ್ಯಕ್ಷ ರಾಜೇಶ್ ವಾರಿಯರ್, “ಗ್ರಾಹಕರಿಗೆ ಮತ್ತು ಸಂಸ್ಥೆಗೆ ಉತ್ತಮ ಮೌಲ್ಯ ತಂದುಕೊಡಲು ವೈವಿಧ್ಯಮಯ ಚಿಂತನೆಗಳ ಅಗತ್ಯವಿದೆ. ನಮ್ಮ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವು ದೇಶದ ವಿವಿಧ ಭಾಗಗಳ ಪ್ರತಿಭೆಗಳನ್ನು ಒಂದೆಡೆ ಸೇರಿಸುತ್ತದೆ. ಎಐ ತಂತ್ರಜ್ಞಾನವನ್ನು ಬಳಸಿ ನೈಜ ಜಗತ್ತಿನ ವಾಣಿಜ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹೊಸ ಉದ್ಯೋಗಿಗಳನ್ನು ಇದು ಸಜ್ಜುಗೊಳಿಸಲಿದೆ,” ಎಂದರು.

ಎಐ ಯುಗಕ್ಕೆ ಕಾಗ್ನಿಜೆಂಟ್ ಸಿದ್ಧತೆ

ಎಐ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳಲು ಕಾಗ್ನಿಜೆಂಟ್ ಬೃಹತ್ ಯೋಜನೆ ರೂಪಿಸಿದ್ದು, ಮುಂದಿನ ದಿನಗಳಲ್ಲಿ 5,000 ಫ್ರಾಂಟಿಯರ್ ಸರ್ಟಿಫೈಡ್ ಇಂಜಿನಿಯರ್‌ಗಳು ಹಾಗೂ 10,000 ಬಿಸಿನೆಸ್ ಆಪರೇಟರ್‌ಗಳನ್ನು ಸೃಷ್ಟಿಸುವ ಗುರಿ ಹೊಂದಿದೆ. ಇದು ಉದ್ಯಮಗಳಿಗೆ ಎಐ ತಂತ್ರಜ್ಞಾನವನ್ನು ಅಳೆಯಬಹುದಾದ ಆರ್ಥಿಕ ಲಾಭವಾಗಿ ಪರಿವರ್ತಿಸಲು ನೆರವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T131728.052
    ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್
    October 9, 2026 | 0
  • ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ
    October 6, 2026 | 0
  • ಯ್ಯ (6)
    ಮನುಷ್ಯನಿಗೆ ಮಾರಕವಾಗುತ್ತಾ… ಎಐ!
    September 12, 2026 | 0
  • Untitled design (44)
    ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ
    September 9, 2026 | 0
  • ಆಸ್ಟ್ರಾ
    ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version