• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಇಂದು ಉಡಾವಣೆ!

ಕವಿತಾ by ಕವಿತಾ
July 18, 2026 - 10:05 am
in ತಂತ್ರಜ್ಞಾನ
0 0
0
ಜ್ಞಾನಪೀಠ ಪ್ರಶಸ್ತಿ (3)

ಶ್ರೀಹರಿಕೋಟ, ಜುಲೈ 18: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಇಂದು ವೇದಿಕೆ ಸಜ್ಜಾಗಿದೆ. ದೇಶದ ಪ್ರಮುಖ ಖಾಸಗಿ ಬಾಹ್ಯಾಕಾಶ ತಂತ್ರಜ್ಞಾನ ಸಂಸ್ಥೆಯಾದ ಸ್ಕೈರೂಟ್ ಏರೋಸ್ಪೇಸ್ (Skyroot Aerospace) ಅಭಿವೃದ್ಧಿಪಡಿಸಿರುವ ‘ವಿಕ್ರಮ್-1’ ರಾಕೆಟ್ ಇಂದು ಬೆಳಗ್ಗೆ 11.30 ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದೆ. ಇದು ಭಾರತದ ನೆಲದಿಂದ ಸಂಪೂರ್ಣವಾಗಿ ಖಾಸಗಿಯಾಗಿ ಅಭಿವೃದ್ಧಿಪಡಿಸಲಾದ ಮೊದಲ ಆರ್ಬಿಟಲ್ ರಾಕೆಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

A historic new frontier for India’s space journey!

At 11:30 AM today, Skyroot Aerospace will undertake the maiden orbital launch of Vikram-1, India’s first privately developed launch vehicle.

This four-stage rocket is designed to provide rapid and on-demand launch services.… pic.twitter.com/1qFVTwNOuZ

— Narendra Modi (@narendramodi) July 18, 2026

RelatedPosts

ಮನುಷ್ಯನಿಗೆ ಮಾರಕವಾಗುತ್ತಾ… ಎಐ!

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ

Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್

ADVERTISEMENT
ADVERTISEMENT

‘ಮಿಷನ್ ಆಗಮನ್’ ವಿಶೇಷತೆ ಏನು?

ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಡಾ. ವಿಕ್ರಂ ಸಾರಾಭಾಯಿ ಅವರ ಗೌರವಾರ್ಥ ಈ ರಾಕೆಟ್‌ಗೆ ‘ವಿಕ್ರಮ್-1’ ಎಂದು ಹೆಸರಿಡಲಾಗಿದೆ. ಈ ಉಡಾವಣೆಗೆ ‘ಮಿಷನ್ ಆಗಮನ್’ ಎಂದು ಹೆಸರಿಡಲಾಗಿದ್ದು, ಇದು ಪ್ರಮುಖವಾಗಿ ತಂತ್ರಜ್ಞಾನ ಪ್ರದರ್ಶನ (Technology Demonstration) ಪೇಲೋಡ್‌ಗಳನ್ನು ಭೂಮಿಯ ಕಕ್ಷೆಗೆ ಹೊತ್ತೊಯ್ಯಲಿದೆ. ಖಾಸಗಿ ಬಾಹ್ಯಾಕಾಶ ಉದ್ಯಮದಲ್ಲಿ ಭಾರತದ ಸಾಮರ್ಥ್ಯವನ್ನು ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸುವ ಮಹತ್ವದ ಹೆಜ್ಜೆಯಾಗಿ ಈ ಮಿಷನ್ ಪರಿಗಣಿಸಲಾಗಿದೆ.

ಪ್ರಧಾನಿ ಮೋದಿ ಹಾಗೂ ವಿಜ್ಞಾನಿಗಳ ಕೈಬರಹದ ಪೋಸ್ಟ್‌ಕಾರ್ಡ್

ಈ ಉಡಾವಣೆ ಕೇವಲ ತಾಂತ್ರಿಕ ಸಾಧನೆಯಷ್ಟೇ ಅಲ್ಲ, ಭಾವನಾತ್ಮಕ ಮಹತ್ವವನ್ನೂ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕೈಬರಹದಲ್ಲಿ ಬರೆದಿರುವ, ‘ವಂದೇ ಮಾತರಂ’ ಎಂಬ ದೇಶಭಕ್ತಿಯ ಸಂದೇಶ ಹೊಂದಿರುವ ವಿಶೇಷ ಪೋಸ್ಟ್‌ಕಾರ್ಡ್‌ನ್ನು ವಿಕ್ರಮ್-1 ಬಾಹ್ಯಾಕಾಶಕ್ಕೆ ಕೊಂಡೊಯ್ಯಲಿದೆ.

ಇದರ ಜೊತೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಪ್ರಮುಖ ವಿಜ್ಞಾನಿಗಳು ಮತ್ತು ಭಾರತದ ಗಗನಯಾತ್ರಿಗಳು ಕೈಬರಹದಲ್ಲಿ ಬರೆದಿರುವ ವಿಶೇಷ ಪೋಸ್ಟ್‌ಕಾರ್ಡ್‌ಗಳನ್ನೂ ಈ ಮಿಷನ್ ಹೊತ್ತೊಯ್ಯಲಿದೆ. ಭಾರತೀಯ ಬಾಹ್ಯಾಕಾಶ ಪಯಣದ ಸ್ಮರಣೀಯ ಕ್ಷಣಗಳನ್ನು ಜಗತ್ತಿಗೆ ಪರಿಚಯಿಸುವ ಉದ್ದೇಶ ಈ ಯೋಜನೆಯಲ್ಲಿದೆ.

‘X’ನಲ್ಲಿ ಪೋಸ್ಟ್ ಹಂಚಿಕೊಂಡ ಪ್ರಧಾನಿ ಮೋದಿ 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ವಿಕ್ರಮ್-1 ಉಡಾವಣೆಯನ್ನು ಭಾರತದ ಬಾಹ್ಯಾಕಾಶ ಪಯಣದ ಹೊಸ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ.

“ಇದು ಭಾರತದ ಬಾಹ್ಯಾಕಾಶ ಕ್ಷೇತ್ರದ ಐತಿಹಾಸಿಕ ಘಟ್ಟ. ಭಾರತದ ಮೊದಲ ಖಾಸಗಿ ಆರ್ಬಿಟಲ್ ಉಡಾವಣಾ ನೌಕೆಯಾದ ವಿಕ್ರಮ್-1 ನಮ್ಮ ಯುವಕರ ಪ್ರತಿಭೆ, ನವೋದ್ಯಮ ಹಾಗೂ ಆತ್ಮವಿಶ್ವಾಸದ ಪ್ರತೀಕವಾಗಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಸರ್ಕಾರ ಕೈಗೊಂಡಿರುವ ಸುಧಾರಣೆಗಳು ಹೊಸ ಅವಕಾಶಗಳನ್ನು ಸೃಷ್ಟಿಸಿವೆ,” ಎಂದು ಪ್ರಧಾನಿ ಹೇಳಿದ್ದಾರೆ.

ನಾಲ್ಕು ಹಂತಗಳ (Four-stage) ಈ ರಾಕೆಟ್ ವೇಗವಾದ ಹಾಗೂ ಬೇಡಿಕೆಗೆ ತಕ್ಕ ಉಪಗ್ರಹ ಉಡಾವಣಾ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾಗಿದೆ. ಈ ಯಶಸ್ವಿ ಉಡಾವಣೆಯು ಭಾರತದಲ್ಲಿ ಖಾಸಗಿ ಬಾಹ್ಯಾಕಾಶ ಉದ್ಯಮಕ್ಕೆ ಹೊಸ ಉತ್ತೇಜನ ನೀಡುವ ನಿರೀಕ್ಷೆ ಇದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 21T185107.193

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
September 21, 2026 - 6:53 pm
0

Untitled design 2026 09 21T182459.768

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

by ಶಾಲಿನಿ ಕೆ. ಡಿ
September 21, 2026 - 6:25 pm
0

Untitled design 2026 09 21T180152.658

ಮತ್ತೆ ಬಲೂಚಿಸ್ತಾನದ ಮೇಲೆ ಪಾಕ್ ದಾಳಿ: ಸುಮ್ಮನಿರುತ್ತಾ ಅಫ್ಘಾನಿಸ್ತಾನ ?

by Hemanth Kumar S
September 21, 2026 - 6:03 pm
0

Untitled design 2026 09 21T172019.136

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 21, 2026 - 5:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (6)
    ಮನುಷ್ಯನಿಗೆ ಮಾರಕವಾಗುತ್ತಾ… ಎಐ!
    September 12, 2026 | 0
  • Untitled design (44)
    ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ
    September 9, 2026 | 0
  • ಆಸ್ಟ್ರಾ
    ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ
    September 8, 2026 | 0
  • Untitled design (32)
    Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್
    September 1, 2026 | 0
  • Untitled design (30)
    ಕೀಪ್ಯಾಡ್ ಫೋನ್‌ ಬಳಕೆದಾರರಿಗೆ PhonePe ಗುಡ್‌ನ್ಯೂಸ್: UPI 123Pay ಆರಂಭ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version