• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

ಸಿಎಂ ಡಿಕೆಶಿ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ: ಆರೋಪಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 27, 2026 - 11:40 am
in Uncategorized
0 0
0
Untitled Design 2026 11 27T113934.209

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮ ಯಾತ್ರಿ ಆ್ಯಪ್ ಮೂಲಕ ಆಟೋ ಬುಕ್ ಮಾಡಿ, ಆಟೋ ಚಾಲಕನ ಮೊಬೈಲ್‌ನಿಂದಲೇ ಪೊಲೀಸರಿಗೆ ಬಾಂಬ್ ಸ್ಫೋಟದ ಬೆದರಿಕೆ ಹಾಕಿದ್ದ ಕಾರ್ತಿಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದು, ಈ ಹಿಂದೆಯೂ ಹಲವು ಬಾರಿ ಬೆದರಿಕೆ ಕರೆಗಳನ್ನು ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸಿಎಂ ನಿವಾಸದ ಬಳಿ ನಡೆದ ಈ ವಿಚಿತ್ರ ಘಟನೆಯಿಂದ ಕೆಲಕಾಲ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಆತಂಕಕ್ಕೊಳಗಾಗಿದ್ದರು. ಆದರೆ ತಕ್ಷಣ ಪೊಲೀಸರು ಪರಿಶೀಲನೆ ನಡೆಸಿದಾಗ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿರಲಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿತ್ತು.

RelatedPosts

ಅಪ್ಪು ಅಭಿಮಾನಿಗಳಿಗೆ ಹೊಂಬಾಳೆ ಗುಡ್‌ನ್ಯೂಸ್: ಯೂಟ್ಯೂಬ್‌ಗೆ ಎಂಟ್ರಿ ಕೊಟ್ಟ ‘ಯುವರತ್ನ’

ಮೈಮಾಟ ಸಾಂಗ್ ಸುತ್ತ ಗಾಸಿಪ್: ಚಂದನ್ ಕೊಟ್ರು ಕ್ಲಾರಿಟಿ

ದೀಪಾವಳಿ ಹೊತ್ತಲ್ಲೇ ಡ್ರೈ ಫ್ರೂಟ್ಸ್ ದುಬಾರಿ: ವ್ಯಾಪಾರ ವಹಿವಾಟಿಗೂ ಹೊಡೆತ!

‘ಕಿಂಗ್’ ಚಿತ್ರದ ಪವರ್‌ಫುಲ್ ಹೊಸ ಪೋಸ್ಟರ್ ರಿವೀಲ್ ಮಾಡಿದ ಶಾರುಖ್ ಖಾನ್

ADVERTISEMENT
ADVERTISEMENT

ಆಟೋ ಬುಕ್ ಮಾಡಿ ಬೆದರಿಕೆ ಹಾಕಿದ್ದ ಕಾರ್ತಿಕ್!

ನವೆಂಬರ್ 5ರಂದು ಈ ಘಟನೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಭಗವಂತರಾಯನ್ ಎಂಬವರು ನಮ್ಮ ಯಾತ್ರಿ ಆ್ಯಪ್ ಮೂಲಕ ಆಟೋ ಚಾಲನೆ ಮಾಡುತ್ತಿದ್ದರು. ಇದೇ ಆ್ಯಪ್ ಮೂಲಕ ಕಾರ್ತಿಕ್ ಎಂಬ ವ್ಯಕ್ತಿ ಸದಾಶಿವನಗರದಿಂದ ಆರ್.ಆರ್. ನಗರಕ್ಕೆ ತೆರಳಲು ಆಟೋ ಬುಕ್ ಮಾಡಿದ್ದ.

ಆ್ಯಪ್‌ನಲ್ಲಿ ಬಂದ ಪಿಕಪ್ ಲೊಕೇಶನ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸದ ಸಮೀಪ ತೋರಿಸಿತ್ತು. ಹೀಗಾಗಿ ನಿಗದಿತ ಸ್ಥಳಕ್ಕೆ ತೆರಳಿದ ಆಟೋ ಚಾಲಕ ಭಗವಂತರಾಯನ್, ಬುಕ್ಕಿಂಗ್ ಮಾಡಿದ್ದ ಕಾರ್ತಿಕ್‌ಗೆ ಕರೆ ಮಾಡಿ ತಾನು ಸಿಎಂ ನಿವಾಸದ ಬಳಿ ಬಂದಿರುವುದಾಗಿ ತಿಳಿಸಿದ್ದಾರೆ.

ಈ ವೇಳೆ ಕರೆ ಸ್ವೀಕರಿಸಿದ ಕಾರ್ತಿಕ್, ತಾನು ಸಿಎಂ ನಿವಾಸದ ಒಳಗಿರುವುದಾಗಿ ಹೇಳಿದ್ದಾನೆ. ಅಲ್ಲದೆ, ನಿವಾಸದ ಎದುರು ಬ್ಯಾರಿಕೇಡ್ ಹಾಕಿಕೊಂಡು ಪೊಲೀಸರು ನಿಂತಿದ್ದು, ಅವರಿಗೆ ಮೊಬೈಲ್ ಫೋನ್ ನೀಡುವಂತೆ ಆಟೋ ಚಾಲಕನಿಗೆ ಸೂಚಿಸಿದ್ದಾನೆ.

ಪೊಲೀಸರಿಗೇ ಬಾಂಬ್ ಸ್ಫೋಟದ ಬೆದರಿಕೆ!

ಅಪರಿಚಿತ ವ್ಯಕ್ತಿಯ ಮಾತಿನಂತೆ ಆಟೋ ಚಾಲಕ ಅಲ್ಲಿದ್ದ ಪೊಲೀಸರಿಗೆ ಮೊಬೈಲ್ ಫೋನ್ ನೀಡಿದ್ದಾರೆ. ಕರೆ ಸ್ವೀಕರಿಸಿದ ಪೊಲೀಸರೊಂದಿಗೆ ಮಾತನಾಡಿದ ಕಾರ್ತಿಕ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ.

ಅಷ್ಟೇ ಅಲ್ಲದೆ, ಮುಖ್ಯಮಂತ್ರಿಗಳ ಬೆಂಗಾವಲು ವಾಹನಗಳ ಸಂಚಾರದ ವೇಳೆ ಸ್ಫೋಟ ಸಂಭವಿಸಲಿದೆ ಎಂಬ  ಸಂದೇಶವನ್ನೂ ನೀಡಿದ್ದಾನೆ. ಈ ರೀತಿ ಹೇಳಿಕೆ ನೀಡಿದ ಬೆನ್ನಲ್ಲೇ ಕರೆ ಕಡಿತಗೊಳಿಸಿದ್ದಾನೆ.

ಇದರಿಂದ ಎಚ್ಚೆತ್ತ ಪೊಲೀಸರು ಕೂಡಲೇ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಮೊದಲು ಆಟೋ ಚಾಲಕ ಭಗವಂತರಾಯನ್ ಅವರ ಆಟೋವನ್ನು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮುಖ್ಯಮಂತ್ರಿ ನಿವಾಸದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಪಾಸಣೆ ನಡೆಸಿ, ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ.

ಪರಿಶೀಲನೆಯಲ್ಲಿ ಬಯಲಾಯ್ತು ಹುಸಿ ಬೆದರಿಕೆ

ಬಾಂಬ್ ಬೆದರಿಕೆ ಹಿನ್ನೆಲೆ ಪೊಲೀಸರು ತಕ್ಷಣವೇ ತಪಾಸಣೆ ನಡೆಸಿದರೂ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಮುಖ್ಯಮಂತ್ರಿ ನಿವಾಸ ಹಾಗೂ ವಿಧಾನಸೌಧಕ್ಕೆ ಸಂಬಂಧಿಸಿದಂತೆ ನೀಡಲಾಗಿದ್ದ ಬೆದರಿಕೆ ಹುಸಿಯಾಗಿರುವುದು ಪರಿಶೀಲನೆಯ ಬಳಿಕ ತಿಳಿದುಬಂದಿದೆ. 

ಘಟನೆಗೆ ಸಂಬಂಧಿಸಿದಂತೆ ಆಟೋ ಚಾಲಕ ಭಗವಂತರಾಯನ್ ನೀಡಿದ ದೂರಿನ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಟೋ ಬುಕ್ ಮಾಡಿದ್ದ ಕಾರ್ತಿಕ್ ಯಾರು? ಯಾವ ಉದ್ದೇಶದಿಂದ ಮುಖ್ಯಮಂತ್ರಿಗಳ ನಿವಾಸ ಮತ್ತು ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಹಾಕಿದ್ದಾನೆ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು.

ಆರೋಪಿ ಕಾರ್ತಿಕ್ ಬಂಧನ: ಮಾನಸಿಕ ಅಸ್ವಸ್ಥನಂತೆ ವರ್ತನೆ!

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಬುಕ್ ಮಾಡಿದ್ದ ಕಾರ್ತಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದಾನೆ ಎನ್ನಲಾಗಿದ್ದು, ಈ ಹಿಂದೆಯೂ ಹಲವು ಬಾರಿ ಇದೇ ರೀತಿಯ ಬೆದರಿಕೆ ಕರೆಗಳನ್ನು ಮಾಡಿರುವ ಮಾಹಿತಿ ಲಭ್ಯವಾಗಿದೆ.

ಕಾರ್ತಿಕ್ ತನ್ನ ಪೋಷಕರಿಂದ ದೂರವಾಗಿದ್ದು, ಮನೆಯಿಂದ ಹೊರಗುಳಿದಿದ್ದ ಎನ್ನಲಾಗಿದೆ. ಆತನ ಹಿನ್ನೆಲೆ ಹಾಗೂ ಈ ಹಿಂದಿನ ಬೆದರಿಕೆ ಕರೆಗಳ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಪ್ರಕ್ರಿಯೆಗೆ ಒಳಪಡಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 27T113934.209

ಸಿಎಂ ಡಿಕೆಶಿ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ: ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
November 27, 2026 - 11:40 am
0

Untitled Design 2026 11 27T111359.050

ಇನ್ಮುಂದೆ ಕರೆಂಟ್ ಬಿಲ್‌ನಲ್ಲಿ ಮಹತ್ವದ ಬದಲಾವಣೆ: ಹಗಲು, ರಾತ್ರಿ ಬಳಕೆಗೆ ಪ್ರತ್ಯೇಕ ದರ, ಕೇಂದ್ರದಿಂದ ಹೊಸ ರೂಲ್ಸ್.!

by ಶಾಲಿನಿ ಕೆ. ಡಿ
November 27, 2026 - 11:17 am
0

Untitled Design 2026 11 27T103314.521

ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಮಳೆ ಸಾಧ್ಯತೆ: ರಾಜ್ಯಾದ್ಯಂತ ನ.29ರಿಂದ ಒಣಹವೆ

by ಶಾಲಿನಿ ಕೆ. ಡಿ
November 27, 2026 - 10:34 am
0

Your paragraph text 2026 11 26T184907.028

ಶೃಂಗೇರಿ ಶಾರದಾಂಬೆ ದರ್ಶನ ಪಡೆದ ನಟಿ ತ್ರಿಷಾ: ಫೋಟೋ ವೈರಲ್

by ಶಾಲಿನಿ ಕೆ. ಡಿ
November 26, 2026 - 6:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (6)
    ಅಪ್ಪು ಅಭಿಮಾನಿಗಳಿಗೆ ಹೊಂಬಾಳೆ ಗುಡ್‌ನ್ಯೂಸ್: ಯೂಟ್ಯೂಬ್‌ಗೆ ಎಂಟ್ರಿ ಕೊಟ್ಟ ‘ಯುವರತ್ನ’
    October 30, 2026 | 0
  • Your paragraph text 2026 10 29T115115.369
    ಮೈಮಾಟ ಸಾಂಗ್ ಸುತ್ತ ಗಾಸಿಪ್: ಚಂದನ್ ಕೊಟ್ರು ಕ್ಲಾರಿಟಿ
    October 29, 2026 | 0
  • Your paragraph text 2026 10 29T105003.454
    ದೀಪಾವಳಿ ಹೊತ್ತಲ್ಲೇ ಡ್ರೈ ಫ್ರೂಟ್ಸ್ ದುಬಾರಿ: ವ್ಯಾಪಾರ ವಹಿವಾಟಿಗೂ ಹೊಡೆತ!
    October 29, 2026 | 0
  • Untitled Design 2026 10 27T180734.779
    ‘ಕಿಂಗ್’ ಚಿತ್ರದ ಪವರ್‌ಫುಲ್ ಹೊಸ ಪೋಸ್ಟರ್ ರಿವೀಲ್ ಮಾಡಿದ ಶಾರುಖ್ ಖಾನ್
    October 27, 2026 | 0
  • ಮಂತ್ರಾಲಯಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ 10ಕ್ಕೂ ಹೆಚ್ಚು ಮಂದಿಗೆ ಗಾಯ
    ಮಂತ್ರಾಲಯಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 10ಕ್ಕೂ ಹೆಚ್ಚು ಮಂದಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version