ವೇದಿಕೆ ಮೇಲೆ ಮಾತನಾಡುತ್ತಲೇ ಕುಸಿದು ಬಿದ್ದು ಯುವತಿ ಸಾವು

Film 2025 04 06t125811.484

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಬದಲಾದ ಆಹಾರ ಪದ್ಧತಿಯಿಂದಾಗಿ ಅನೇಕ ಖಾಯಿಲೆಗೆ ತುತ್ತಾಗುತ್ತಿದ್ದಾರೆ.

ಮಹಾರಾಷ್ಟ್ರದ ಧಾರಾಶಿವ್‌ನ ಕಾಲೇಜೊಂದರಲ್ಲಿ ತಮ್ಮ ಕಾಲೇಜಿನ ಬೀಳ್ಕೊಡುಗೆ ಸಮಾರಂಭದಂದು ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಬಗ್ಗೆ ಕಳವಳ ಹೆಚ್ಚಾಗಿದೆ. ವರ್ಷಾ ಮಾತನಾಡುವಾಗ ಪ್ರಜ್ಞೆ ತಪ್ಪಿ ಬಿದ್ದ ಕಾರಣ ಅವರನ್ನು ಪರಾಂಡದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

 

ಪ್ರಾಥಮಿಕ ಮಾಹಿತಿಯ ಪ್ರಕಾರ, ವರ್ಷಾ 8 ವರ್ಷದವಳಿದ್ದಾಗ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಆದರೆ ಕಳೆದ 12 ವರ್ಷಗಳಿಂದ ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಿರಲಿಲ್ಲ ಮತ್ತು ಯಾವುದೇ ಔಷಧಿಗಳನ್ನು ತೆಗೆದುಕೊಳ್ಳುತ್ತಿರಲಿಲ್ಲ ತಿಳಿದುಬಂದಿದೆ.

ಭಾಷಣ ಮಾಡುತ್ತಿದ್ದಾಗ ಅವರಿಗೆ ಹಠಾತ್ ಹೃದಯಾಘಾತವಾಗಿ ಸಾವು ಸಂಭವಿಸಿದೆ. ವರ್ಷಾ ಅವರ ನಿಧನಕ್ಕೆ ಕಾಲೇಜು ಆಡಳಿತ ಮಂಡಳಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಒಂದು ದಿನದ ರಜೆ ಘೋಷಿಸಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version